
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ, ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.7 ರಂದೂ ರಜೆ ಘೋಷಣೆ ಮಾಡಿದೆ.
ಗ್ರಾಮೀಣ ಪ್ರದೇಶದಿಂದ ಪದವಿ ತರಗತಿಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸಂಚಾರಕ್ಕೆ ಅನಾನುಕೂಲವಾದಲ್ಲಿ ಅವರಿಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳು ಆನ್ಲೈನ್ ತರಗತಿ ಮೂಲಕ ಕ್ಲಾಸ್ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಕೆರೆ, ನದಿ , ಸಮುದ್ರಗಳಿಗೆ ಮಕ್ಕಳು ತೆರಳದಂತೆ ಪಾಲಕರು ಎಚ್ಚರಿಕೆ ವಹಿಸಬೇಕು. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೇಂದ್ರ ಸ್ಥಾನದಲ್ಲಿದ್ದು ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.