ಸುಳ್ಯ: ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು ಬಂದ ಮಹಿಳೆಯೊಬ್ಬರು ಸಮೀಪದ ಕಾಡಿಗೆ ತೆರಳಿದ್ದು ದೇವರಗದ್ದೆ ಬಳಿ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.
ಮೂಲತಃ ಬೆಂಗಳೂರಿನ ನೆಲಮಂಗಲ ಮೂಲದ ಗಂಗ ಲಕ್ಷ್ಮಮ್ಮ(60ವ) ಎಂದು ತಿಳಿದು ಬಂದಿದೆ. ಸುಬ್ರಹ್ಮಣ್ಯ ದೇವರ ಗದ್ದೆಯ ಕಾಡಿನಲ್ಲಿ 2-3 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸುಬ್ರಹ್ಮಣ್ಯ ಪೊಲೀಸರು ಜೂ.6 ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.