ಮಹಿಳೆಯರಿಗೆ ಉದ್ಯಮ ಶಕ್ತಿ: ಸ್ವಸಹಾಯ ಸಂಘದ ಮೂಲಕ 100 ಪೆಟ್ರೋಲ್ ಬಂಕ್ ಸ್ಥಾಪನೆ‌

Share with

ಸ್ವಸಹಾಯ ಸಂಘದ ಮೂಲಕ ಮಹಿಳೇಯರಿಗೆ ಉದ್ಯೋಗ ಶಕ್ತಿ

ಬೆಂಗಳೂರು: ರಾಜ್ಯ ಸರ್ಕಾರವು ‘ಉದ್ಯಮ ಶಕ್ತಿ’ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಲಾಗುವುದು. ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜು.07 ರಂದು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ಈ ಯೋಜನೆ ರೂಪಿಸಲಾಗುವುದು ಎಂದಿದ್ದಾರೆ. ಪೆಟ್ರೋಲ್‌ ಬಂಕ್‌ಗಳ ಸ್ಥಾಪನೆಗೆ ಪೆಟ್ರೋಲಿಯಂ ಕಂಪನಿಗಳು ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್ ಬಂಕ್‌ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *