ಬೆಂಗಳೂರು: ಮದ್ಯ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯ ಅವರು ಜು.07 ರಂದು ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ನೀಡಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್ ಮಂಡಿಸುತ್ತಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದೆ.
ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಇದರಿಂದ ಮದ್ಯ ದುಬಾರಿಯಾಗಲಿದೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಅಬಕಾರಿ ತೆರಿಗೆಯನ್ನು ಶೇಕಡಾ 20 ರಷ್ಟು ಹೆಚ್ಚಳ ಮಾಡಲಾಗಿದೆ. ರಾಜ್ಯದ ಅಬಕಾರಿ ತೆರಿಗೆಯಲ್ಲಿ ಶೇ 20ರಷ್ಟು ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ತೆರಿಗೆ ಶೇ 10ರಷ್ಟು ಹೆಚ್ಚಳವಾಗಲಿದೆ. ಇಂದು ವಿಧಾನಸಭೆಯಲ್ಲಿ ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಮಲಿನ ಹೆಚ್ಚುವರಿ ತೆರಿಗೆಯನ್ನು ಘೋಷಣೆ ಮಾಡಿದ್ದಾರೆ.
ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇಕಡಾ 175ರಿಂದ 185ಕ್ಕೆ ಹೆಚ್ಚಿಸಲಾಗಿದೆ ಎಂದು ಸಹ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.