ಕರ್ನಾಟಕದ ಗೃಹಜ್ಯೋತಿ ಯೋಜನೆಯಿಂದ ರಾಜ್ಯಾದ್ಯಂತ 1.3 ಲಕ್ಷ ಗ್ರಾಹಕರು ಸ್ವಯಂಪ್ರೇರಿತವಾಗಿ ಹೊರನಡೆದಿದ್ದಾರೆ. ವೈಯಕ್ತಿಕ ದಾಖಲೆಗಳ ಗೌಪ್ಯತೆ ಕುರಿತು ಆತಂಕದಿಂದ ಆಧಾರ್, ಪ್ಯಾನ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿ 16 ಲಕ್ಷ ಗ್ರಾಹಕರ ದಾಖಲೆಗಳು ಇನ್ನೂ ಲಭ್ಯವಾಗಿಲ್ಲ. ದಾಖಲೆ ಸಲ್ಲಿಸದ ಫಲಾನುಭವಿಗಳು ಅಕ್ಟೋಬರ್ 31ರೊಳಗೆ ಉಪವಿಭಾಗೀಯ ಕಚೇರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.




