ನವದೆಹಲಿ: ಇಂದು(ಮಾ.8) ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಾಗಿದ್ದು, ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರಮೋದಿ ಯವರು ದೇಶದ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡದ್ದಾರೆ. ಗೃಹಬಳಕೆ ಅಡುಗೆ ಅನಿಲ (ಎಲ್ ಪಿಜಿ) ಸಿಲಿಂಡರ್‌ಗಳ ದರದಲ್ಲಿ 100 ರೂ. ಕಡಿತಗೊಳಿಸಿದ್ದು ಈ ಕುರಿತು ಪ್ರಧಾನಿಯವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಇಂದು ಮಹಿಳಾ ದಿನವಾಗಿದ್ದು ನಮ್ಮ ಸರಕಾರ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಇಳಿಸಿರುವ ಇದು ದೇಶಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಇದರ ಪ್ರಯೋಜನ ಲಭಿಸಲಿದೆ. ಅಡುಗೆ ಅನಿಲವನ್ನು ಹೆಚ್ಚು ಕೈಗೆಟಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರ ಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿದ್ದೇವೆ. ಇದು ಮಹಿಳೆಯ ರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭವಾಗಿ ಬದುಕಲು ಖಾತ್ರಿಪಡಿಸುವ ನಮ್ಮ ಭದ್ರತೆಗೆ ಅನುಗುಣವಾಗಿದೆಯೆಂದು ಪ್ರಧಾನಿ ತಿಳಿಸಿದ್ದಾರೆ.