ಮೌಂಟ್‌ ಕಾರ್ಮೆಲ್‌ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Share with

ಬಂಟ್ವಾಳ: ಮೌಂಟ್‌ ಕಾರ್ಮೆಲ್‌ ಪದವಿ ಪೂರ್ವ ಕಾಲೇಜು ಮೊಡಂಕಾಪು ಇದರ 2023-2024 ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ.

ಪರೀಕ್ಷೆಗೆ ಕುಳಿತ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜೋಶಲ್‌ ಮರೀನಾ ಪಿಂಟೊ ಅವರು 592 (98.66%) ಅಂಕ ಪಡೆದು ರಾಜ್ಯದಲ್ಲಿ ಆರನೇ ಸ್ಥಾನ ಗಳಿಸಿರುತ್ತಾರೆ. ಕಲಾ ವಿಭಾಗದಲ್ಲಿ ರೆನ್ಸನ್‌ ಸ್ಟಿಫನ್‌ ಕುಟಿನ್ಹೊ ಅವರು 581 (96.83%) ಅಂಕ ಹಾಗೂ ವಿಜ್ಞಾನ ವಿಭಾಗದಲ್ಲಿ ಉಜ್ವಲ್‌ ಪೈ ಅವರು 574(95.66%) ಅಂಕ ಗಳಿಸಿರುತ್ತಾರೆ.

ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.


Share with

Leave a Reply

Your email address will not be published. Required fields are marked *