ಕಾರ್ಕಳ : 13 ವರ್ಷಗಳ ಬಳಿಕ ಕಾರ್ಕಳದ ಕಾಡಿನಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು. ಇದರಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀತಬೈಲುವಿನಲ್ಲಿ ನಕ್ಸಲ್ ನಿಗ್ರಹ ದಳ ಕೂಬಿಂಗ್ ನಡೆಸುತ್ತಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ.
ವಾರದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದ ಕಾಡಿನಂಚಿನ ಮನೆಯಲ್ಲಿ ನಕ್ಸಲರು ಬಿಟ್ಟು ಹೋಗಿದ್ದ ಮೂರು ಬಂದೂಕುಗಳು ಪತ್ತೆಯಾಗಿದ್ದವು. ಬಳಿಕ ದಿನಗಳಲ್ಲಿ ಕಾರ್ಕಳದ ಕಾಡುಗಳಲ್ಲಿ ನಕ್ಸಲರ ಓಡಾಟ ನಡೆಸುತ್ತಿರುವುದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್‌ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ನಿನ್ನೆ (ಸೋಮವಾರ) ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ. ಈ ವೇಳೆ ಪೊಲೀಸರು ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಈ ಕಾಳಗದಲ್ಲಿ ನೇತ್ರಾವತಿ ನಕ್ಸಲ್ ತಂಡದ ನೇತ್ರತ್ವ ವಹಿಸಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.