ಮಣಿಪಾಲ: ಡಾ. ಬಿ.ಆರ್.‌ ಅಂಬೇಡ್ಕರ್ 133ನೇ ಜಯಂತಿ ಆಚರಣೆ

Share with

ಉಡುಪಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಚುನಾವಣೆಯ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಏಪ್ರಿಲ್ 14ರಂದು ಮಣಿಪಾಲದ ರಜತಾದ್ರಿಯ ಆವರಣದಲ್ಲಿ ಆಚರಿಸಲಾಯಿತು.

ಡಾ. ಬಿ.ಆರ್.‌ ಅಂಬೇಡ್ಕರ್ 133ನೇ ಜಯಂತಿ ಆಚರಣೆ

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾರ್ಲಾಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ದ್ವಿತೀಯ ಪಿ.ಯು.ಸಿ ಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ಅನಿತಾ ಮಡ್ಲೂರ್, ವಿವಿಧ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡಾ 90ಕ್ಕಿಂತ ಹೆಚ್ಚು ಅಂಕ ಪಡೆದ ಹಾಸ್ಟಲ್ ವಿದ್ಯಾರ್ಥಿಗಳಾದ ಕೆ.ಜಯಂತಿ, ನರಸಪ್ಪ, ಪ್ರೀತಿ ಮಹಾಂತೇಶ್ ಚವಾಣ್, ಮಾರುತಮ್ಮ, ಮಾಣಿಕ್ಯಮ್ಮ, ಜಯರಾಜ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.


Share with

Leave a Reply

Your email address will not be published. Required fields are marked *