ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ತುಮಕೂರು ತಾಲ್ಲೂಕಿನ ಚಿಕ್ಕತೊಟ್ಟಿಲು ಕೆರೆ ಬಳಿ ನಡೆದಿದೆ. ಭೀಮಾಶಂಕರ್ (15)ಸಾವನ್ನಪ್ಪಿದ ವಿದ್ಯಾರ್ಥಿ.
ಇತ್ತೀಚೆಗಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೇ ಹೃದಯಾಘಾತದ ಘಟನೆಗಳು ವರದಿಯಾಗುತ್ತಲೇ ಇವೆ. ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಪ್ರೌಢಶಾಲಾ ವಿದ್ಯಾರ್ಥಿಯೊಬ್ಬ ಪ್ರಶಸ್ತಿ ಸ್ವೀಕರಿಸುವ ಮುನ್ನವೇ ಹೃದಯಾಘಾತಕ್ಕೆ ಒಳಗಾದ ಘಟನೆ ನಡೆದಿದೆ. 15 ವರ್ಷದ ಭೀಮಾಶಂಕರ್, ಹೃದಾಯಾಘಾತದಿಂದ ಕೊನೆಯುಸಿರೆಳೆದ ದುರ್ದೈವಿಯಾಗಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ಮೂಲದ ಭೀಮಾಶಂಕರ್, ತುಮಕೂರು ತಾಲೂಕಿನ ಬೆಳದರ ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಯಾಗಿದ್ದರು. ಇಂದು ಚಿಕ್ಕತೊಟ್ಟಿಲು ಕೆರೆ ಬಳಿ ನಡೆಯುತ್ತಿದ್ದ ಹೋಬಳಿ ಮಟ್ಟದ ಪ್ರೌಢಾಶಾಲ ಕ್ರೀಡಾಕೂಟದಲ್ಲಿ ಭೀಮಾಶಂಕರ್ ಭಾಗಿಯಾಗಿದ್ದ ಸ್ಥಳದಲ್ಲಿ ಘಟನೆ ನಡೆದಿದೆ.