ಮಹಿಳೆಯ ಹೊಟ್ಟೆಯಲ್ಲಿ 18 ಮಕ್ಕಳು! ವಿಡಿಯೋ ಕಂಡು ಶಾಕ್ ಆದ ನೆಟ್ಟಿಗರು

Share with

ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳೆಯ ಹೊಟ್ಟೆ ಬಲೂನಿನಂತೆ ಊದಿಕೊಂಡಿರುವುದನ್ನು ಕಾಣಬಹುದು. ಇದಲ್ಲದೇ ವಿಡಿಯೋದಲ್ಲಿ ಮಹಿಳೆಯ ಏಕಕಾಲದಲ್ಲಿ 18 ಮಕ್ಕಳಿಗೆ ಜನ್ಮ ನೀಡಲಿದ್ದಾಳೆ ಎಂದು ಬರೆಯಲಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ಹರಿದಾಡುತ್ತಿದೆ. ಸೆಪ್ಟೆಂಬರ್ 4ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 1.5 ಮಿಲಿಯನ್ ಅಂದರೆ 10ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬಗೆಬಗೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ಪ್ರಕಾರ ಈ ಮಹಿಳೆ ಅಮೆರಿಕದ ಟೆಕ್ಸಾಸ್ ನಿವಾಸಿ ಹಾಗೂ 18 ಮಕ್ಕಳಿಗೆ ಜನ್ಮ ನೀಡಲಿದ್ದಾಳೆ ಎಂದು ಬರೆಯಲಾಗಿದೆ. ಆದರೆ ಈ ವಿಡಿಯೋಗೆ ನೆಟ್ಟಿಗರೊಬ್ಬರು ಪ್ರತಿಕ್ರಿಯಿಸಿದ್ದು, ವಿಡಿಯೋದಲ್ಲಿ ಪ್ರೆಗ್ನೆನ್ಸಿ ಬಗ್ಗೆ ಬಂದಿರುವ ಸುದ್ದಿ ಸಂಪೂರ್ಣ ಸುಳ್ಳು. ಆಕೆ ಗರ್ಭಿಣಿಯಲ್ಲ, ಬದಲಾಗಿ ಹೊಟ್ಟೆಯೊಳಗೆ ದೊಡ್ಡ ಗಡ್ಡೆ ಹೊಂದಿದ್ದಾಳೆ ಎಂದು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿದ್ದು, ಈ ವೀಡಿಯೋ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಮಹಿಳೆ ಸಾವನ್ನಪ್ಪಿದ್ದಾಳೆ ಎಂದು ಬರೆದುಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *