ರಿಕ್ಷಾ ನಿಲ್ದಾಣದ ಬಳಿ 2 ವರ್ಷದ ಮಗು ಪತ್ತೆ..!

Share with

ಮಂಗಳೂರು: ನಗರದ ಬೈಕಂಪಾಡಿ ರಿಕ್ಷಾ ನಿಲ್ದಾಣದ ಬಳಿ ಅಂದಾಜು 2 ವರ್ಷದ ಗಂಡು ಮಗು ಪತ್ತೆಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ನಗರದ ಬೋಂದೆಲ್ ಕೃಷ್ಣ ನಗರ ಸರ್ಕಾರಿ ವಿಶೇಷ ದತ್ತು ಸಂಸ್ಥೆಯಲ್ಲಿ ದಾಖಲಿಸಲಾಗಿದೆ.

ಈ ಮಗುವಿನ ವಾರಸುದಾರರು ಇದ್ದಲ್ಲಿ 60 ದಿನದೊಳಗೆ ಸೂಕ್ತ ದಾಖಲೆಗಳೊಂದಿಗೆ ಪಡೀಲ್ ಪ್ರಜಾಸೌಧ ಕಟ್ಟಡದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ (ದೂ.ಸಂ: 0824-2440004) ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.


Share with

Leave a Reply

Your email address will not be published. Required fields are marked *