ಡಿ.14 ರಿಂದ 17 ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್

Share with

ಮೂಡುಬಿದಿರೆ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ನಡೆಸಿಕೊಂಡು ಬರುತ್ತಿರುವ ವೈಭವದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಡಿಸೆಂಬರ್ 14 ರಿಂದ 17ರ ತನಕ ನಾಲ್ಕು ದಿನಗಳ ಕಾಲ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ|ಎಂ. ಮೋಹನ ಆಳ್ವ ಅವರು ತಿಳಿಸಿದ್ದಾರೆ.

'ಆಳ್ವಾಸ್ ವಿರಾಸತ್' ಡಿಸೆಂಬರ್ 14 ರಿಂದ 17ರ ತನಕ ನಾಲ್ಕು ದಿನಗಳ ಕಾಲ ನಡೆಯಲಿದೆ.

ಈ ವರ್ಷ ಆಳ್ವಾಸ್ ವಿರಾಸತ್‍ಗೆ 29ನೇ ವರ್ಷವಾಗಿದ್ದು, ಆಳ್ವಾಸ್ ವಿರಾಸತ್ 2023ಕ್ಕೆ ದಿನಾಂಕ ನಿಗದಿಯಾಗಿದೆ. ಡಿ.14ರಂದು ಪ್ರಾರಂಭವಾಗಿ 17ರಂದು ಮುಕ್ತಾಯಗೊಳ್ಳಲಿದೆ. ಡಿ.14, 15, 16 ಮತ್ತು 17 ಸೇರಿ ನಾಲ್ಕು ದಿನಗಳ ಕಾಲ ಈ ಸಾಂಸ್ಕೃತಿಕ ಉತ್ಸವವು ಜರುಗಲಿದೆ. ಸಂಜೆ 6 ಗಂಟೆಗೆ ಪ್ರಾರಂಭವಾಗುವ ಈ ಉತ್ಸವವು ರಾತ್ರಿ 9.30ಕ್ಕೆ ಮುಕ್ತಾಯವಾಗಲಿದೆ.

ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ವನಜಾಕ್ಷಿ ಕೆ.ಶ್ರೀಪತಿ ಭಟ್ ವೇದಿಕೆಯಲ್ಲಿ ಆಳ್ವಾಸ್ ವಿರಾಸತ್ ಕಾರ್ಯಕ್ರಮಗಳು ನಡೆಯಲಿದೆ. ಡಿಸೆಂಬರ್ 14 ಗುರುವಾರ ದಂದು ಪ್ರಾರಂಭವಾಗಿ 17 ನೇ ತಾರೀಕಿನಂದು ಭಾನುವಾರ ಮುಕ್ತಾಯಗೊಳ್ಳಲಿದೆ. 50 ಸಾವಿರಕ್ಕಿಂತ ಹೆಚ್ಚಿನ ಪ್ರೇಕ್ಷಕರು ಕಣ್ತುಂಬಿಕೊಳ್ಳಲು ಅನುವಾಗುವಂತಹ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ನಾಲ್ಕು ದಿನಗಳ ಕಾಲ ನಡೆಯುವ ರಾಷ್ಟೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 2023ಕ್ಕೆ ಎಲ್ಲರೂ ಪಾಲ್ಗೊಳ್ಳಬೇಕೆಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ ಮೋಹನ ಆಳ್ವ ಅವರು ವಿನಂತಿಸಿದ್ದಾರೆ.


Share with

Leave a Reply

Your email address will not be published. Required fields are marked *