
ಫಿಡೆ ಚೆಸ್ ವಿಶ್ವಕಪ್ ಫೈನಲ್ ನಲ್ಲಿ ರನ್ನರ್ ಅಪ್ ಆದ ಭಾರತದ ಪ್ರಜ್ಞಾನಂದ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಸದ್ಯ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ಸೌಜನ್ಯಯುತವಾಗಿ ಭೇಟಿ ಮಾಡಿದ್ದಾರೆ. ಸ್ಟಾಲಿನ್ ಅವರು ಪ್ರಜ್ಞಾನಂದರನ್ನು ಅವರ ಪೋಷಕರೊಂದಿಗೆ ಅಭಿನಂದಿಸಿ, 30 ಲಕ್ಷ ರೂ. ಚೆಕ್ ವಿತರಿಸಿದರು.
ಇನ್ನು ಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ ಅವರು ಪ್ರಜ್ಞಾನಂದ ಅವರ ಪೋಷಕರಿಗೆ ಎಲೆಕ್ಟ್ರಿಕ್ ಕಾರನ್ನು ಉಡುಗೊರೆ ನೀಡಿರುವುದು ಗೊತ್ತೇ ಇದೆ.