30ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ

Share with

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜೆಕಲ ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ೩೦ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ರಾಜೇಶ್ ನಾಯ್ಕ್ ಅವರು ಉದ್ಯಮ ಕ್ಷೇತ್ರದ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದ ಎಸ್‌. ಕೆ.ಎಫ್ ಎಲಿಕ್ಸರ್ ಇಂಡಿಯಾ ಸಮೂಹದ ಆಡಳಿತ ನಿರ್ದೇಶಕರಾದ ಡಾ|ರಾಮಕೃಷ್ಣ ಆಚಾರ್ ಅವರನ್ನು ಸನ್ಮಾನಿಸಿದರು.



ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭಾಗವಹಿಸಿ ಶುಭ ಹಾರೈಸಿದರು. ಸಂಘದ ಗೌರವಾಧ್ಯಕ್ಷರಾದ ಮನೋಜ್ ಆಚಾರ್ಯ ನಾಣ್ಯ, ಕಟ್ಟಡ ಸಮಿತಿ ಗೌರವಾಧ್ಯಕ್ಷರಾದ ಲೋಕೇಶ್ ಆಚಾರ್ಯ ಪುಂಜಾಲಕಟ್ಟೆ, ಕಟಪಾಡಿ ಮಠದ ಗುರುಸೇವಾ ಪರಿಷತ್ತಿನ ಬಂಟ್ವಾಳ ಕ್ಷೇತ್ರದ ಅಧ್ಯಕ್ಷರಾದ ಯುವರಾಜ ಆಚಾರ್ಯ, ವಿಶ್ವಜ್ಯೋತಿ ಮಹಿಳಾ ಮಂಡಳಿ ಅಧ್ಯಕ್ಷೆ ಪ್ರತಿಮಾ ಉಪೇಂದ್ರ ಆಚಾರ್ಯ, ಧಾರ್ಮಿಕ ಕಾರ್ಯದರ್ಶಿ ಕಳ್ಳಿಗೆ ನಾರಾಯಣ ಆಚಾರ್ಯ, ಉಪಾಧ್ಯಕ್ಷ ಯಶೋಧರ ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ ಮೊದಲಾದವರು ಉಪಸ್ಥಿತರಿದ್ದರು.ಸಂಘದ ಕಾರ್ಯದರ್ಶಿ ಸಂದೀಪ್ ಬಿ.ಆಚಾರ್ಯ ಅವರು ಪ್ರಸ್ತಾವನೆಗೈದರು. ಸಾಂಸ್ಕೃತಿಕ ಕಾರ್ಯದರ್ಶಿ ಸುನೀಲ್ ಬಿ.ಆಚಾರ್ಯ ಅವರು ಸನ್ಮಾನ ಪತ್ರ ವಾಚಿಸಿದರು. ಮಾಜಿ ಅಧ್ಯಕ್ಷ ಜಯಪ್ರಕಾಶ್ ಆಚಾರ್ಯ ಅವರು ವಂದಿಸಿ, ಮೌನೇಶ್ ವಿಶ್ವಕರ್ಮ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಭಜನಾ ಸಂಕೀರ್ತನೆ, ಮಹಾಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.


Share with

Leave a Reply

Your email address will not be published. Required fields are marked *