ಮಂಗಳೂರು: ಕಳೆದ ಒಂದು ವಾರದಲ್ಲಿ ನಗರ ಪೊಲೀಸರು ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ 42 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಅವರು ತಿಳಿಸಿದ್ದಾರೆ.
ನಿಷೇಧಿತ ಮಾದಕ ದ್ರವ್ಯಗಳ ವಿರುದ್ಧದ ಕಾರ್ಯಾಚರಣೆಯ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ನವೆಂಬರ್ 6ರಿಂದ 12ರವರೆಗೆ 23,550 ಮೌಲ್ಯದ 1 ಕೆಜಿ ಗಾಂಜಾ ಮತ್ತು 2.7 ಲಕ್ಷ ಮೌಲ್ಯದ 54 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.
ಇದರಲ್ಲಿ ಒಟ್ಟು 7 ಪ್ರಕರಣಗಳು ದಾಖಲಾಗಿದ್ದು 13 ಮಂದಿಯ ಬಂಧನವಾಗಿದೆ. ಮಾದಕ ದ್ರವ್ಯ ಸೇವನೆಗೆ ಸಂಬಂಧಿಸಿದಂತೆ 35 ಪ್ರಕರಣಗಳು ದಾಖಲಾಗಿದ್ದು, 36 ಮಂದಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.