ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ವಾಣಿಜ್ಯ ಉದ್ದೇಶಗಳಿಗೆ ಅಕ್ರಮವಾಗಿ ಬಳಸಲಾಗುತ್ತಿದ್ದ ಗೃಹಬಳಕೆಯ LPG ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.

ಯಾದಗಿರಿಯ ವಿವಿಧ ಹೋಟೆಲ್ & ಆಹಾರ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಒಟ್ಟು 46 ಗೃಹಬಳಕೆಯ LPG ಸಿಲಿಂಡರ್‌ಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಗೃಹಬಳಕೆಗೆ ಮೀಸಲಾದ ಸಿಲಿಂಡರ್‌ಗಳನ್ನು ವಾಣಿಜ್ಯ ಬಳಕೆಗೆ ಬಳಸುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ.




