18 ರಾಜ್ಯದಲ್ಲಿ 5 ದಿನ ಮಳೆ ಮುನ್ಸೂಚನೆ..!

Share with

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು,  ಉತ್ತರ ಮತ್ತು ದಕ್ಷಿಣ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಮಾ.15 ರವರೆಗೂ ಈಶಾನ್ಯದ ರಾಜ್ಯಗಳಲ್ಲಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದೇ ವೇಳೆ ಬಂಗಾಳ ಕೊಲ್ಲಿಯಲ್ಲಿ 2ನೇ ಚಂಡಮಾರುತ ರೂಪುಗೊಳ್ಳುತ್ತಿದ್ದು, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಮಾ.15 ರವರೆಗೆ ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಗುಡುಗು, ಹಿಮಪಾತ ಸಹಿತ ಮಳೆ ನಿರೀಕ್ಷಿಸಬಹುದಾಗಿದೆ.

ಕೇರಳದಿಂದ ತಮಿಳುನಾಡುವರೆಗೂ ಮಳೆ ಸಾಧ್ಯತೆ ಇದೆ. ದಕ್ಷಿಣ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಮಾ.11ರಿಂದ 13 ರವರೆಗೆ ಕೇರಳ, ಮಾಹೆಯಲ್ಲಿ ಭಾರಿ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Share with

Leave a Reply

Your email address will not be published. Required fields are marked *