ಗಮನ ಸೆಳೆದ ಒಂದೇ ತರಗತಿಯ 5 ಜೋಡಿ ಅವಳಿ-ಜವಳಿ ವಿದ್ಯಾರ್ಥಿನಿಯರು

Share with

ಒಂದೇ ತರಗತಿಯ 5 ಜೋಡಿ ಅವಳಿ-ಜವಳಿ ವಿದ್ಯಾರ್ಥಿನಿಯರು.

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ-ಜವಳಿ ವಿದ್ಯಾರ್ಥಿಗಳು ಗಮನ ಸೆಳೆದಿದ್ದಾರೆ.

ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ 5 ಜೋಡಿ ಅವಳಿ-ಜವಳಿ ವಿದ್ಯಾರ್ಥಿಗಳು ಎಂಟನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಪರೂಪದಲ್ಲಿ ಅಪರೂಪವಾಗಿರುವ ಅವಳಿ-ಜವಳಿ ಮಕ್ಕಳನ್ನು ನೋಡುವುದೇ ಒಂದು ಖುಷಿಯ ವಿಚಾರವಾಗಿದೆ.

ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ-ಫಾತೀಮಾ ರೌಲ, ದುಲೈಕತ್ ರುಫಿದಾ-ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದಾರೆ. ಅದರಲ್ಲೂ ಈ ಐದು ಜೋಡಿ ಕೂಡ ವಿದ್ಯಾರ್ಥಿನಿಯರು ಎನ್ನುವುದು ಉಲ್ಲೇಖದ ವಿಷಯವಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಕೀರ್ತಿಯನ್ನು ತಂದುಕೊಡಲಿ ಎಂಬುದು ನಮ್ಮ ಹಾರೈಕೆಯಾಗಿದೆ.


Share with

Leave a Reply

Your email address will not be published. Required fields are marked *