
ಕಾಸರಗೋಡು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯಲ್ಲಿ 56 ಕೇಂದ್ರಗಳನ್ನು ಅಪಾಯಕಾರಿ ಅಪಘಾತ ಪ್ರದೇಶಗಳೆಂದು ಜಿಲ್ಲಾಧಿಕಾರಿ ನೇಮಿಸಿದ ತಜ್ಞರ ಸಮಿತಿ ತನ್ನ ವರದಿಯಲ್ಲಿ ಸೂಚಿಸಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನಪ್ರತಿನಿಧಿಗಳ ಹಾಗು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಇಂಬುಶೇಖರ್ ಮಾತನಾಡಿ, ಇಂತಹ ಸ್ಥಳಗಳಲ್ಲಿ ಮಳೆಗಾಲ ಆರಂಭವಾಗುವ ಮುನ್ನ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದ್ದಾರೆ.
ಭೂಕುಸಿತ ಹಾಗು ನೆರೆ ಸಾಧ್ಯತೆ ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಪತ್ತು ನಿರ್ವಹಣೆಗೆ ಆದ್ಯತೆ ನೀಡಲಾಗುವುದು. ಎಲ್ಲದರ ಮೇಲೆ ಸದಾ ನಿಗಾ ಇರಿಸ ಲಾಗುವುದೆಂದು ಅವರು ತಿಳಿಸಿದ್ದಾರೆ.