6.60 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ!

Share with

ಬೀದರ್‌ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 6.60 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಬೀದ‌ರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಸಮೀಪ ಪೊಲೀಸರು ಈ ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ಮೂಲದ ಇಬ್ಬರು, ಒಡಿಶಾ ಮೂಲದ ಪಿಕಪ್ ವಾಹನದಲ್ಲಿ ಹೈದ್ರಾಬಾದ್‌ನಿಂದ ಸೊಲ್ಲಾಪುರಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿ, 6.60 ಕೋಟಿ ರೂ. ಮೌಲ್ಯದ 660 KG ಗಾಂಜಾ ವಶಕ್ಕೆ ಪಡೆದುಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.


Share with

Leave a Reply

Your email address will not be published. Required fields are marked *