6000 ಹುದ್ದೆಗಳು ಶೀಘ್ರದಲ್ಲೇ ಭರ್ತಿ.. ಸರ್ಕಾರ ಘೋಷಣೆ

Share with

ಸಚಿವ ಈಶ್ವರ ಖಂಡ್ರೆ ಅವರು ಸಿಹಿಸುದ್ದಿ ನೀಡಿದ್ದಾರೆ. ವನ್ಯಜೀವಿ ಸಂರಕ್ಷಣೆ & ಅರಣ್ಯದ ದಕ್ಷ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 6000 ಕಾಯಂ ಹಾಗೂ ಗುತ್ತಿಗೆ ಆಧಾರಿತ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ.

ವಲಯ ಅರಣ್ಯಾಧಿಕಾರಿ (RFO) ಹುದ್ದೆಗಳಲ್ಲಿ ಶೇ. 50 ರಷ್ಟನ್ನು ನೇರ ನೇಮಕಾತಿ ಮೂಲಕ ಮತ್ತು ಉಳಿದ ಶೇ. 50 ರಷ್ಟನ್ನು ಬಡ್ತಿಯ ಮೂಲಕ ಭರ್ತಿ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *