ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಆನೇಕಲ್‌ನ ಮರಸೂರು ಮಡಿವಾಳದ ಮನೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಧುಶ್ರೀ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾಳೆ.

ಡೆತ್ ನೋಟ್ ನಲ್ಲಿ ಶಾಲೆಯಲ್ಲಿ ನಡೆದ ಘಟನೆಯ ಬಗ್ಗೆ ಉಲ್ಲೇಖ ಮಾಡಿದ್ದು, ನನ್ನ ವಿರುದ್ಧ ಇಲ್ಲಸಲ್ಲದ ಅಪವಾದವನ್ನು ಹೊರಿಸಿದ್ದಾರೆ. ಅವಮಾನ ಸಹಿಸಿಕೊಂಡು ನನಗೆ ಬದುಕಲು ಆಗುತ್ತಿಲ್ಲ ಎಂದು ಬರೆದಿದ್ದಾಳೆ.




