ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದ ಬಳಿಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಧ್ವಜಾರೋಹಣವನ್ನು ಅಪಾರ್ಟ್ಮೆಂಟ್ ನ ಹಿರಿಯ ನಾಗರಿಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್(80) ಅವರು ನಡೆಸಿದ್ದರು.
ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ತೆರಳಿದ ಅವರು ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿಂದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.