ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಗೆ ಅವಕಾಶ ನೀಡಿ: ಮೀನುಗಾರ ಸಂಘಟನೆಯ ಮುಖಂಡರ ಒತ್ತಾಯ

Share with

ಉಡುಪಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮೀನುಗಾರ ಸಮಾಜದ ನಾಯಕ ಪ್ರಮೋದ್ ಮಧ್ವರಾಜ್ ಅವರಿಗೆ ಅವಕಾಶ ನೀಡಬೇಕು ಎಂದು ವಿವಿಧ ಮೀನುಗಾರ ಸಂಘಟನೆಯ ಮುಖಂಡರು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ

ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲ ಭಾರತ ಮೀನುಗಾರರ ಸಂಘದ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ, ರಾಜಕೀಯ ಹಿನ್ನೆಲೆಯಿಂದ ಬಂದಿರುವ ಪ್ರಮೋದ್ ಮಧ್ವರಾಜ್, ಶಾಸಕರಾಗಿ, ಸಚಿವರಾಗಿಯೂ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ.

ಮೀನುಗಾರರ ಅನೇಕ ಸಮಸ್ಯೆಗಳು ಇನ್ನೂ ಪರಿಹಾರ ಕಂಡಿಲ್ಲ. ಈ ಎಲ್ಲ ಯೋಜನೆ ಅನುಷ್ಠಾನ ಮಾಡಲು ಸಮರ್ಥ ನಾಯಕತ್ವ ಹೊಂದಿರುವ ಪ್ರಮೋದ್ ಮಧ್ವರಾಜ್ ಅವರಿಂದ ಮಾತ್ರ ಸಾಧ್ಯ‌. ಪ್ರಮೋದ್ ಮಧ್ವರಾಜ್ ಅವರಿಗೆ ಉಡುಪಿ ಕ್ಷೇತ್ರವೇ ಹೆಚ್ಚು ಸೂಕ್ತವಾಗಿರುವುದರಿಂದ ಅವರಿಗೆ ಈ ಕ್ಷೇತ್ರದಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ತಿಳಿಸಿದರು.
ಈಗಿನ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯಮಟ್ಟದ ನಾಯಕಿಯಾಗಿರುವುದರಿಂದ ಅವರಿಗೆ ರಾಜ್ಯದ 28 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮೀನುಗಾರ ಮುಖಂಡರಾದ ಸಾಧು ಸಾಲಿಯನ್, ಜಗನ್ನಾಥ ಕುಂದರ್, ಜಗನ್ನಾಥ ಅಮೀನ್, ಮೋಹನ್ ಕುಂದರ್, ನಾಗರಾಜ್ ಸುವರ್ಣ, ಕೃಷ್ಣ ಸುವರ್ಣ, ಸುಭಾಸ್ ಮೆಂಡನ್, ರವಿರಾಜ್ ಸುವರ್ಣ, ಯೋಗೀಶ್ ಸಾಲ್ಯಾನ್ ಉಪಸ್ಥಿತರಿದ್ದರು.


Share with

Leave a Reply

Your email address will not be published. Required fields are marked *