ಉಡುಪಿ: ಮಂಡ್ಯದಲ್ಲಿ ಕೇಸರಿ ಧ್ವಜ ಹಾಕಲು ಅಡ್ಡಿಪಡಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನಾ ಸಭೆ ನಡೆಸಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿರುವುದನ್ನು ಸಹಿಸಲು ಸಾಧ್ಯವಾಗದೆ, ಈ ರೀತಿ ಹಿಂದೂ ಚಟುವಟಿಕೆಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ದೇಶದ ಯಾವುದೇ ಭಾಗದಲ್ಲಿ ಕೇಸರಿ ಧ್ವಜ ಅಳವಡಿಸಲು ಇವರಿಂದ ಅನುಮತಿ ಪಡೆಯಬೇಕಾ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಪ್ರತಿಭಟನಾ ಸಭೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು. ಈ ಪ್ರತಿಭಟನಾ ಸಭೆಯಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.