ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡು ಮೂಲದ ವ್ಯಕ್ತಿಯೊಬ್ಬರು ಚಿನ್ನಾಭರಣ ಕಳ್ಳಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ತಪಾಸಣೆ ನಡೆಸಿದ್ದು, ತಪಾಸಣೆ ವೇಳೆ ಆತನಲ್ಲಿ 11.16 ಲಕ್ಷ ರೂಪಾಯಿ ಮೌಲ್ಯದ ಪೇಸ್ಟ್ ರೂಪದಲ್ಲಿ 179 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದನ್ನು ವಶಕ್ಕೆ ಪಡೆಯಲಾಗಿದೆ.
ಆತ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬೆಡ್ ಶೀಟ್, ದಿಂಬಿನ ಕವರ್ ಮತ್ತು ಹಾರ್ಲಿಕ್ಸ್ ಬಾಟಲಿಯಲ್ಲಿ ಬಚ್ಚಿಟ್ಟು ತಂದಿದ್ದ ಎಂದು ತಿಳಿದು ಬಂದಿದೆ.