ಉಡುಪಿ: ಕಾಡಬೆಟ್ಟು ಹುಲಿ ವೇಷ ತಂಡದ ಮುಖ್ಯಸ್ಥ ಅಶೋಕ್‌ರಾಜ್ ಕಾಡಬೆಟ್ಟು(56) ಅವರು ಅಲ್ಪಕಾಲದ ಅಸೌಖ್ಯದಿಂದ ಜ.1ರಂದು ನಿಧನ ಹೊಂದಿದರು.
ಕಳೆದ ನವರಾತ್ರಿಯಂದು ಹುಲಿವೇಷ ಪ್ರದರ್ಶನ ನೀಡಲು ಬೆಂಗಳೂರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಅವರು ಕುಸಿದು ಬಿದ್ದಿದ್ದರು. ಬಳಿಕ ಬೆಂಗಳೂರು, ಮಣಿಪಾಲಚಿಕಿತ್ಸೆ ಪಡೆಯುತ್ತಿದ್ದರು. ಉಡುಪಿಯ ಆದರ್ಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜ.1ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.