ಬಂಟ್ವಾಳ: ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಬೆಳ್ತಂಗಡಿಯ ನಿವಾಸಿ ಪ್ರದೀಶ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ ಬಿ.ಸಿ ರೋಡ್ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಬೈಕ್ ನಡುವೆ ಈ ಅಪಘಾತ ಸಂಭವಿಸಿ ಬೈಕ್ ಸವಾರ ಪ್ರದೀಶ್ ಶೆಟ್ಟಿ ಅವರು ಗಂಭೀರ ಗಾಯಗೊಂಡಿದ್ದು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.