ಕಲ್ಲಡ್ಕ: ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ(ನಿ) ಕಲ್ಲಡ್ಕ ಶಾಖೆ ಪ್ರಾರಂಭವಾಗಿ ಹತ್ತು ವರ್ಷ ಪೂರ್ಣಗೊಳಿಸಿದ್ದರ ಪ್ರಯುಕ್ತ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಕೆ ಎಮ್ ಸಿ ಆಸ್ಪತ್ರೆ ಅತ್ತಾವರ ಮಂಗಳೂರು, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ) ಕಲ್ಲಡ್ಕ, ಗುರೂಜಿ ಸ್ವ- ಸಹಾಯ ಸಂಘ ಕಲ್ಲಡ್ಕ, ಸುರಕ್ಷ ಸಂಗಮ ಪೂರ್ಲಿಪಾಡಿ, ಜಾನ್ಸಿರಾಣಿ ಲಕ್ಷ್ಮೀಬಾಯಿ ಮಹಿಳಾ ಮಂಡಳಿ ಕಲ್ಲಡ್ಕ ಇವುಗಳ ಜಂಟಿ ಆಶ್ರಯದಲ್ಲಿ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ, ನೇತ್ರ ಹಾಗೂ ದಂತ ಚಿಕಿತ್ಸಾ ಶಿಬಿರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಫೆ.10ನೇ ಶನಿವಾರ ಬೆಳಿಗ್ಗೆ ಗಂಟೆ 9:00ರಿಂದ ಮಧ್ಯಾಹ್ನ 1 ಗಂಟೆ ತನಕ ಜರಗಲಿರುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ವಿನಂತಿಸಿದ್ದಾರೆ.