ಪುತ್ತೂರು: ನವವಿವಾಹಿತೆಯೊಬ್ಬರು ನೇಣು ಬಿಗಿದು ಪತಿಯ ಮನೆಯಲ್ಲಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.


ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಷ್ಪ ದಂಪತಿ ಪುತ್ರಿ ಶೋಭಾ(26) ನೇಣಿಗೆ ಶರಣಾದವರು.
ಇವರನ್ನು ಕಳೆದ ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




