ಬೆಳ್ತಂಗಡಿ: ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಬೆಳ್ತಂಗಡಿ ಖಾಸಗಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತಪಟ್ಟ ವಿದ್ಯಾರ್ಥಿನಿಯನ್ನು ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್ ಹಾಗೂ ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಎಂದು ಗುರುತಿಸಲಾಗಿದೆ.
ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಎರಡು ದಿನಗಳ ಹಿಂದೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.