ಉಪ್ಪಳ: ಫೆ.22ರಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ವೇದಮಾತೆ ಶ್ರೀ ಗಾಯತ್ರೀ ದೇವಿಯ ಹಾಗೂ ಭಗವನ್ ಶ್ರೀ ನಿತ್ಯಾನಂದ ಗುರುದೇವರ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಚಂಡಿಕಾ ಯಾಗ ನೆರವೇರಲಿದೆ.
ಈ ಕಾರ್ಯಕ್ರಮವು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕರಾದ ಬ್ರಹ್ಮಶ್ರೀ ಕಮಲಾದೇವಿ ಪ್ರಸಾದ ಅಸ್ರಣ್ಣರವರ ಆಚಾರ್ಯತ್ವದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.
ಪ್ರಾತಃಕಾಲ 7ರಿಂದ ಪ್ರಾರ್ಥನೆ, ಪುಣ್ಯಾಹ, ಗಣಯಾಗ, ಶ್ರೀ ಗಾಯತ್ರೀ ದೇವಿಗೆ ಪಂಚವಿಂಶತಿ ಕಲಶಾಧಿವಾಸ, ಚಂಡಿಕಾ ಯಾಗ, 7.30ಕ್ಕೆ ಚಂಡಿಕಾ ಯಾಗ ಪ್ರಾರಂಭ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಧ್ಯಾಹ್ನ 2ಕ್ಕೆ ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ ವಿಧ್ಯಾಪೀಠದ ವಿದ್ಯಾರ್ಥಿಗಳಿಂದ ಮಹಿಷಾ ವಧೆ ಯಕ್ಷಗಾನ ಬಯಲಾಟ, ರಾತ್ರಿ 7.30ಕ್ಕೆ ಪೂಜೆ ಹಾಗೂ ಪ್ರಸಾದ ವಿತರಣೆ ನಡೆಯಲಿದೆ.