ಮಣಿಪಾಲ: ಪರೀಕ್ಷೆಯ ಸಂದರ್ಭ ಉಂಟಾದ ಘಟನೆಯಿಂದ ಮನನೊಂದ ಕಾಲೇಜು ವಿದ್ಯಾರ್ಥಿಯೋರ್ವ ಕ್ಲಾಸ್ ರೂಮ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿಡಿಯೋ ಸದ್ಯ ವೈರಲ್ ಆಗುತ್ತಿದೆ.ಈ ಘಟನೆ ಎರಡು ದಿನಗಳ ಹಿಂದೆ ಮಣಿಪಾಲದ ಕಾಲೇಜಿನಲ್ಲಿ ಸಂಭವಿಸಿತ್ತು.
ಮಾಣಿಪಾಲದ ಮಾಹೆಯ ಎಂಸಿಎಚ್‌ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ. ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ ಪರೀಕ್ಷಾ ಕೇಂದ್ರದಿಂದಲೇ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಸದ್ಯ ಈ ದೃಶ್ಯ ವೈರಲ್ ಆಗುತ್ತಿದೆ.