ಬಂಟ್ವಾಳ: ತಾಲೂಕಿನ ದೇವಸ್ಯಪಡೂರು ಗ್ರಾಮದ ಪೆರಿಯಾರ್ ದೋಟ ಶ್ರೀ ದೇವಿ ಮತ್ತು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ 6ನೇ ವರ್ಷದ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯಕ್ಷಗಾನ ಬಯಲಾಟವು ಫೆ.21 ರಂದು ನಡೆಸಲಾಯಿತು.
ಬೆಳಿಗ್ಗೆ ಗಂಟೆ 9.00 ಕ್ಕೆ ದೇವತಾ ಪಾರ್ಥನೆ, ಪುಣ್ಯಹ ವಾಚನ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ 12.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ, ಮದ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ, ಸಂಜೆ ಗಂಟೆ 5.00ಕ್ಕೆ ಶ್ರೀ ರಾಮ ಬಾಲಗೋಕುಲ ಅಲಂಪುರಿ ವಗ್ಗ ಹಾಗೂ ಶ್ರೀ ಅಯ್ಯಪ್ಪ ಕುಣಿತ ಭಜನಾ ಮಂಡಳಿ ಅಂದ್ರಳಿಕೆ ಇವರಿಂದ ಕುಣಿತಾ ಭಜನಾ ಕಾರ್ಯಕ್ರಮ ನಡೆಸಲಾಯಿತು.
ಸಂಜೆ ಗಂಟೆ 6.00ಕ್ಕೆ ದುರ್ಗಾನಮಸ್ಕಾರ ಪೂಜೆ ಹಾಗೂ ಭಜನೆ, ರಾತ್ರಿ ಗಂಟೆ 8.30ಕ್ಕೆ ಮಹಾ ಮಂಗಳಾರತಿ, ಅನ್ನ ಸಂತರ್ಪಣೆ, ರಾತ್ರಿ ಗಂಟೆ 9.00ಕ್ಕೆ ಶ್ರೀ ಭಗವತಿ ಪ್ರಸಾದಿತಾ ದಶವತಾರ ಯಕ್ಷಗಾನ ಮಂಡಳಿ ಸಸಿಹಿತ್ಲು ಮಂಗಳೂರು ಇವರು ರಂಗಸ್ಥಳ ಎಂಬ ಕಥಾ ಭಾಗವನ್ನು ಯಕ್ಷಗಾನ ಬಯಲಾಟವಾಗಿ ಆಡಿ ತೋರಿಸಲಾಯಿತು.