ಉಡುಪಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ 17 ವೃತ್ತಿಗಳ ಕುಶಲಕರ್ಮಿಗಳಿಗೆ ಸ್ವಉದ್ಯೋಗ ನಡೆಸಲು ನೀಡುತ್ತಿರುವ ವಿಶೇಷ ಪ್ರೋತ್ಸಾಹವನ್ನು ಸದುಪಯೋಗಪಡಿಸಿ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸ್ವಾವಲಂಬಿ ಭಾರತ ನಿರ್ಮಿಸಲು ಮುಂದಾಗೋಣ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ 45 ಫಲಾನುಭವಿಗಳ ಟೈಲರಿಂಗ್ ತರಬೇತಿ ಕಾರ್ಯಗಾರವನ್ನು ಮಣಿಪಾಲದಲ್ಲಿ ಉದ್ಘಾಟಿಸಿ ಮಾತನಾಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಮೂಲಕ ಸ್ವಉದ್ಯೋಗ ಆರಂಭಿಸಿ ಗ್ರಾಮೀಣ ಭಾಗದಲ್ಲಿ ಯುವಜನತೆಗೆ ಉದ್ಯೋಗ ಸೃಷ್ಟಿಸುವ ಜೊತೆಗೆ, ಇತರರಿಗೂ ಈ ಬಗ್ಗೆ ಮಾಹಿತಿ ನೀಡಿ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿ ಯೋಜನೆಯ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಶ್ರೀ ನಾಗರಾಜ ವಿ. ನಾಯಕ, ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀ ನಾಗರಾಜ್, ಪ್ರಧಾನಮಂತ್ರಿ ಕೌಶಲ್ಯಾಭಿವೃದ್ಧಿ ಕೇಂದ್ರದ ಮೆನೇಜರ್ ಶ್ರೀ ಮನೋಜ್ ಕುಮಾರ್, ಉದ್ಯಮಿ ಶ್ರೀ ವೆಂಕಟೇಶ್ ಶೇಟ್ ಉಪಸ್ಥಿತರಿದ್ದರು.