ಉಡುಪಿ: ಉಡುಪಿ ಜಿಲ್ಲಾ ಶ್ರೀ ರಾಮಸೇನೆ ವತಿಯಿಂದ ಮಾರ್ಚ್ ಕೊನೆಯಲ್ಲಿ ಉಡುಪಿಯಲ್ಲಿ ನಡೆಯಲಿರುವ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನದ ಪೂರ್ವಭಾವಿ ಸಭೆಯು ಮಥುರಾ ಕಂಪರ್ಟ್ಸ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಮಾತನಾಡಿ, ದೇಶ ಮೊದಲು ಎಂಬ ಸಂಘಟನೆಯ ಧ್ಯೇಯದಂತೆ ನಡೆಯುವ ಈ ಕಾರ್ಯಕ್ರಮದ ರೂಪು ರೇಷೆಯ ಬಗ್ಗೆ ಚರ್ಚಿಸಿ ಸಾಧು ಸಂತರು, ಮೋದಿ ಅಭಿಮಾನಿಗಳು, ವಿವಿಧ ಸಂಘಟನೆ, ಹಾಗೂ ಜನಪ್ರತಿನಿದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಗುವುದು ಎಂದರು.
ಶ್ರೀರಾಮಸೇನೆಯ ರಾಜ್ಯ ಪ್ರ ಕಾರ್ಯದರ್ಶಿ ಆನಂದ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜಿಲ್ಲಾ ಶ್ರೀರಾಮಸೇನೆ ವತಿಯಿಂದ ಗೌರವಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಪೂಜಾರಿ ನಿರೂಪಿಸಿದರು.