ಉಡುಪಿ: ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘ ಉಚ್ಚಿಲ ಇದರ ಸಮುದಾಯ ಭವನ ಉದ್ಘಾಟನಾ ಸಮಾರಂಭ ಮಾ.5ರಂದು ನಡೆಯಿತು. ಕೇಮಾರು ಸಾಂದೀಪನಿ ಸಾಧಾನಾಶ್ರಮ ಶ್ರೀಕ್ಷೇತ್ರದ ಈಶ ವಿಠಲದಾಸ ಸ್ವಾಮೀಜಿ ಭವನವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಜಿಲ್ಲಾ ಪರಿಯಾಳ ಸಮಾಜ ಸುಧಾರಕ ಸಂಘದ ಜಿಲ್ಲಾಧ್ಯಕ್ಷರಾದ ಶಂಕರ ಸಾಲಿಯಾನ್ ಕಟಪಾಡಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬಡಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಿವಕುಮಾರ್ ಮೆಂಡನ್ ಹಾಗೂ ಪ್ರಮುಖರು ಮತ್ತು ಪರಿಯಾಳ ಸಮಾಜ ಬಾಂಧವರು ಉಪಸ್ಥಿತರಿದ್ದರು.