ಬಂಟ್ವಾಳ: ಬಂಟ್ವಾಳ ತಾಲೂಕಿನ ಯುವವಾಹಿನಿ ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ “ಮಾತೆಯ ಮಡಿಲು” ವಿಚಾರ ವಿನಿಮಯ ಕಾರ್ಯಕ್ರಮ ಮಾರ್ಚ್ 8 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 9:30 ಕ್ಕೆ ಸರಿಯಾಗಿ ಮಾಣಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ಕೊಂಕಣಪದವು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿ ಇದರ ಮಹಿಳಾ ಅಧ್ಯಕ್ಷರಾದ ಹರಿನಾಕ್ಷಿ ಮುರುವ ಅವರು ನೆರವೇರಿಸುವರು, ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಮಹಿಳಾ ಸಂಘಟನಾ ನಿರ್ದೇಶಕಿ ನಯನ ಸುರೇಶ್, ಕೂಡಪದವು ಶಾಲಾ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ಆರತಿ ದಾಸಪ್ಪ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಮಾಣಿಯ ಅಧ್ಯಕ್ಷರಾದ ಸುರೇಶ್ ಸೂರ್ಯ, ಯುವವಾಹಿನಿ ಮಾಣಿ ಘಟಕದ ಮಹಿಳಾ ನಿರ್ದೇಶಕರಾದ ಶಕೀಲಾ ಕೃಷ್ಣ ಮಿತ್ತಕೋಡಿ, ಮೊದಲಾದವರು ಭಾಗವಹಿಸಲಿರುವರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವ ವಿಟ್ಲ ಸುರಕ್ಷಾ ಹೆಲ್ತ್ ಸೆಂಟರ್ ಡಾಕ್ಟರ್ ಗಾಯತ್ರಿ ಜಿ ಪ್ರಕಾಶ್ ಅವರು “ಸ್ವಸ್ಥ ಮಹಿಳೆ- ಸ್ವಸ್ಥ ಮನೆ” ಎಂಬ ವಿಷಯದ ಕುರಿತಾಗಿ ವಿಚಾರಧಾರೆಯನ್ನು ಮಂಡಿಸಲಿರುವರು, ಹಾಗೂ “ಕಾನೂನಿನ ಸಂರಕ್ಷಣೆಯಲ್ಲಿ ಮಹಿಳೆ “ಎಂಬ ವಿಷಯದ ಬಗ್ಗೆ ವಕೀಲರಾದ ಶೋಭಾ ಲತಾ ಸುವರ್ಣ ಅವರು ವಿಚಾರ ವಿನಿಮಯ ಮಾಡಲಿರುವರು ಎಂದು ಕಾರ್ಯಕ್ರಮದ ಸಂಚಾಲಕಿ ಡಾ. ತ್ರಿವೇಣಿ ರಮೇಶ್ ಮಜಲ್ ಅವರು ತಿಳಿಸಿರುತ್ತಾರೆ.