ಉಡುಪಿ: ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ನಿಟ್ಟೂರಿನ ಕಾಂಚನಾ ಹುಂಡೈ ಕಾರ್ ಶೋ ರೂಂ ಬಳಿ ಮಾ.8ರಂದು ಮುಂಜಾನೆ ನಡೆದಿದೆ.


ಮೃತ ಸವಾರನನ್ನು 21 ವರ್ಷದ ಸ್ವಸ್ತಿಕ್ ಎಂದು ಗುರುತಿಸಲಾಗಿದೆ. ಇವರು ಮಾ.8ರಂದು ಮುಂಜಾನೆ ತನ್ನ ಬೈಕ್ ನಲ್ಲಿ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸ್ವಸ್ತಿಕ್ ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.




