ಉಡುಪಿ: 13.90 ಲಕ್ಷ ರೂ. ಮೊತ್ತದಲ್ಲಿ ನಿರ್ಮಾಣಗೊಂಡ ಕಾಪು ತಾಲೂಕಿನ ಬೆಳಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಕೊಠಡಿಯನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ರಜನಿ ಹಾಗೂ ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.