ಉಡುಪಿ: ಕಾಂಗ್ರೆಸ್ ಸೇರ್ಪಡೆ ಬಳಿಕ ಜಿಲ್ಲಾ ಕಚೇರಿಗೆ ಭೇಟಿಕೊಟ್ಟ ಕೆ.ಜಯಪ್ರಕಾಶ್ ಹೆಗ್ಡೆ

Share with

ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ.ಜಯಪ್ರಕಾಶ್ ಹೆಗ್ಡೆ ಅವರು ಮಾ.14ರಂದು ಭೇಟಿಕೊಟ್ಟರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮಾ.14ರಂದು ಭೇಟಿಕೊಟ್ಟರು.

ಈ ಸಂದರ್ಭದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಯಪ್ರಕಾಶ್ ಹೆಗ್ಡೆ ಅವರನ್ನು ಬರಮಾಡಿಕೊಂಡರು. ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೊರು ಸಹಿತ ಹಲವು ಕಾಂಗ್ರೆಸ್ ನಾಯಕರು ಹೆಗ್ಡೆ ಅವರನ್ನು ಅಭಿನಂದಿಸಿದರು. ಬಳಿಕ‌ ಹೆಗ್ಡೆ ಅವರು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ, ದಿನೇಶ್ ಪುತ್ರನ್, ಉದ್ಯಾವರ ನಾಗೇಶ್ ಕುಮಾರ್, ಭಾಸ್ಕರ್ ರಾವ್ ಕಿದಿಯೂರು ಮೊದಲಾದವರು‌ ಇದ್ದರು.


Share with

Leave a Reply

Your email address will not be published. Required fields are marked *