ದೆಹಲಿ: ಕೇಂದ್ರ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗವು ನೇಮಿಸಿದೆ.


ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ್ದು, ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಚುನಾವಣಾ ಆಯುಕ್ತರ ನೇಮಕದ ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಹಿತಿ ನೀಡಿದ್ದಾರೆ. ಚುನಾವಣಾಧಿಕಾರಿಗಳನ್ನು ಆಯ್ಕೆ ಮಾಡಲು ನೇಮಕಗೊಂಡ ಸಮಿತಿಯ ಮೂವರು ಸದಸ್ಯರಲ್ಲಿ ಚೌಧರಿ ಕೂಡ ಒಬ್ಬರು.
ಆಯ್ಕೆ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧೀರ್ ರಂಜನ್ ಚೌಧರಿ, “ಸುಖಬೀರ್ ಸಂಧು ಹಾಗೂ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ. ಚುನಾವಣಾ ಆಯೋಗದ ಆಯುಕ್ತರನ್ನಾಗಿ ನೇಮಿಸಲು 212 ಅಧಿಕಾರಿಗಳ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಸಮಿತಿ ಮುಂದೆ ಒಟ್ಟು ಆರು ಹೆಸರುಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದ್ದು ಇವರಲ್ಲಿ ಇಬ್ಬರನ್ನು ಆಯುಕ್ತರನ್ನಾಗಿ ಆಯ್ಕೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.




