ಉಡುಪಿ: “ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಬಿಜೆಪಿಯ ಹಿರಿಯ ನಾಯಕರು. ಸಾಕಷ್ಟು ಜವಾಬ್ದಾರಿ ನಿಭಾಯಿಸಿ ಪಕ್ಷಕ್ಕೆ ಕೊಡುಗೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಈಶ್ವರಪ್ಪನವರು ಬೇಸರಗೊಂಡಿರಬಹುದು. ಆದರೆ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ” ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
ಈಶ್ವರಪ್ಪ ಅವರು ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, “ಮುಂದಿನ ದಿನಗಳಲ್ಲಿ ಬೇಸರ ಶಮನಗೊಂಡು 28 ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಈಶ್ವರಪ್ಪ ಕೆಲಸ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಪಕ್ಷದ ಹಿರಿಯರು ಚರ್ಚೆ ಮಾಡಿ ಸೂಕ್ತ ಸ್ಥಾನಮಾನ ಕಲ್ಪಿಸ್ತಾರೆ” ಎಂಬ ನಂಬಿಕೆ ಇದೆ ಎಂದರು.