ಬೆಂಗಳೂರು: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

Share with

ಬೆಂಗಳೂರು: ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ಕುರಿತಾದ ತೀರ್ಪು ಮಾ.22ರಂದು ಪ್ರಕಟವಾಗಿದೆ. ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಹೈಕೋರ್ಟ್ ಆದೇಶ ಹೊರಡಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ.

ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ‘ರುಪ್ಸಾ’ ಹಾಗೂ ‘ಅವರ್ಸ್ ಸ್ಕೂಲ್’ ಸಲ್ಲಿಸಿದ್ದ ಮನವಿಯನ್ನು ನ್ಯಾಯಪೀಠ ಇದೇ ವೇಳೆ ತಿರಸ್ಕರಿಸಿದೆ. ತಡೆ ಕೋರಿ ಸುಪ್ರೀಂಕೋರ್ಟ್ ನಲ್ಲೇ ಮನವಿ ಸಲ್ಲಿಸಿ ಎಂದು ಸೂಚಿಸಿದೆ.


Share with

Leave a Reply

Your email address will not be published. Required fields are marked *