ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿಯಾದ ಕಾರು; ಯುವಕ ಸಾವು

Share with

ಮಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ಮಾ.22ರಂದು ತಡರಾತ್ರಿ ನಡೆದಿದೆ.

ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ

ಮೃತಪಟ್ಟ ಯುವಕನನ್ನು ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರಿನಲ್ಲಿ ನಡೆದಿದೆ.

ಶಮಿತ್ ಶೆಟ್ಟಿಯವರು ಸ್ನೇಹಿತನ ಮನೆಯಲ್ಲಿ ದೈವದ ಕೋಲದಲ್ಲಿ ಭಾಗವಹಿಸಿದ ಬಳಿಕ ತೊಕ್ಕೊಟ್ಟಿನಲ್ಲಿದ್ದ ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಡಿವೈಡರ್ ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದ್ದು, ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *