ಪುತ್ತೂರು ಪೊಲೀಸರಿಂದ ನಟೋರಿಯಸ್ ಕಳ್ಳಿಯ ಬಂಧನ..!!6 ಲಕ್ಷ ಮೌಲ್ಯದ ಚಿನ್ನಾಭರಣ ವಶ

Share with

ಪುತ್ತೂರು: ಪುತ್ತೂರು ನಗರ ಠಾಣಾ ಪೊಲೀಸರು ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯನ್ನು ಬಂಧಿಸಿ ಹಾಗೂ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ದಿನಾಂಕ12.02.2024 ರಂದು ಪುತ್ತೂರು ನಗರದ KSRTC ಬಸ್ ನಿಲ್ದಾಣದಲ್ಲಿ ರೇಷ್ಮಾ ಎನ್ (41) ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳನ್ನು ಯಾರೋ ಕಳ್ಳರು ಕಳವು ಮಾಡಿರುವುದಾಗಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣವನ್ನು ಪುತ್ತೂರು ನಗರ ಠಾಣಾ ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸಿ, ಇದೀಗ ಪ್ರಕರಣದ ಆರೋಪಿ ತಮಿಳುನಾಡು ಮೂಲದ ಅಂತರ್ ರಾಜ್ಯ ನಟೋರಿಯಸ್ ಕಳ್ಳಿಯಾದ ಈಶ್ವರಿ (45) ಯನ್ನು ಬಂಧಿಸಿದ್ದಾರೆ.    ತಮಿಳುನಾಡಿನ ಕೋಯಂಬತ್ತೂರ್ ಜಿಲ್ಲೆಯ ಸಿಕ್ಕಲಂಪಳಯಂ ಸೋಲವಂಪಳಯಂ ಶಕ್ತಿ ನಗರ ನಿವಾಸಿಯಾಗಿದ್ದು, ಪತಿ ವೇಲಪ್ಪನ್ ವಾಸ ಎಂದು ತಿಳಿದು ಬಂದಿದೆ.

ಕಳ್ಳಿಯಿಂದ ಸುಮಾರು 6 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣವನ್ನು ಬೇದಿಸುವಲ್ಲಿ ದ ಕ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯತ್ ಮತ್ತು ದ ಕ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಮ್ ಎನ್ ರವರ ನಿರ್ದೇಶನದಲ್ಲಿ ಪುತ್ತೂರು ಉಪವಿಭಾಗದ ಉಪಾಧೀಕ್ಷಕ ಅರುಣ್ ನಾಗೇಗೌಡ ರವರ ಮಾರ್ಗದರ್ಶನದಲ್ಲಿ, ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕ ಸತೀಶ್ ಜಿ ಜೆ, ರವರ ಸಾರಥ್ಯದಲ್ಲಿ ಪುತ್ತೂರು ನಗರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ನಂದಕುಮಾರ್ ಎಮ್ ಎಮ್ ಹಾಗೂ ಸುಬ್ರಹ್ಮಣ್ಯ ಹೆಚ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಸ್ಕರಿಯ, ಎಮ್ ಎ. ಹೆಚ್ ಸಿ ಕೆ ಬಸವರಾಜ, ಹೆಚ್ ಸಿ ಜಗದೀಶ್, ಹೆಚ್ ಸಿ ಸುಬ್ರಹ್ಮಣ್ಯ, ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಮಪಿಸಿ ರೇವತಿ ಹಾಗೂ ದ.ಕ ಜಿಲ್ಲಾ ಗಣಕ ಯಂತ್ರ ವಿಭಾಗದ ಎಹೆಚ್ ಸಿ ಸಂಪತ್ ಮತ್ತು ಸಿಪಿಸಿ ದಿವಾಕರ್ ರವರು ಭಾಗಿಯಾಗಿದ್ದರು.


Share with

Leave a Reply

Your email address will not be published. Required fields are marked *