ಮಣಿಪಾಲ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ

Share with

ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ದುಷ್ಕರ್ಮಿಗಳ ತಂಡದಿಂದ ಹಲ್ಲೆ

ಸುಮಾರು‌ ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿಕೊಂಡು ಬಂದು, ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ‌ ಹಲ್ಲೆ‌ಗೈದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್(23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *