ಉಡುಪಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಮದ್ಯ, ನಗದು ವಶ

Share with

ಉಡುಪಿ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಾ.26ರ ಬೆಳಿಗ್ಗೆ 9ರಿಂದ 27ರ ಬೆಳಗ್ಗೆ 9ಗಂಟೆಯವರೆಗೆ ಜಿಲ್ಲೆಯಲ್ಲಿ ಎರಡು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿವೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆ; ಮದ್ಯ, ನಗದು ವಶ.

ಎಸ್‌ಎಸ್‌ಟಿ ತಂಡವು ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆಗಳಿಲ್ಲದೇ ಸಾಗಿಸುತಿದ್ದ 85,000 ರೂ.ಗಳನ್ನು ವಶಪಡಿಸಿಕೊಂಡಿದೆ. ಅಬಕಾರಿ ಇಲಾಖೆಯ ವತಿಯಿಂದ 8,210 ರೂ. ಮೌಲ್ಯದ 109 ಲೀ.ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *