ಮಂಗಳೂರು: ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆದೇಶಿಸಿದ್ದಾರೆ.
ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ. ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.